ಬೆಂಗಳೂರು: ಜಿಎಸ್‍ಟಿ ತೆರಿಗೆ ಸಂಗ್ರಹದಲ್ಲಿ ಶೇ.14.3 ರಷ್ಟು ಬೆಳವಣಿಗೆಯಾಗಿದೆ. ಜಿಎಸ್‍ಟಿ ಅಡಿಯಲ್ಲಿ ನೋಂದಾಯಿಸಿಕೊಂಡವರ ಸಂಖ್ಯೆ ಏರುಗತಿಯಲ್ಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಆರ್ಥಿಕ ಹಿಂಜರಿತದಿಂದ ಸ್ವಲ್ಪ ಹಿನ್ನಡೆಯಾಗಿದ್ದರೂ, ಇತರ ರಾಜ್ಯಗಳಿಗೆ ಹೋಲಿಸಿದರೆ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ. ತೆರಿಗೆ ಸಂಗ್ರಹವನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.