ಬೆಂಗಳೂರು; ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗಲು ಸರ್ಕಾರ ‘ಆಶಾದೀಪ’ ಎಂಬ ಯೋಜನೆ ಜಾರಿಗೊಳಿಸಿದೆ.

ರಾಜ್ಯ ಕಾರ್ಮಿಕ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೊಸೈಟಿಯ ಮೂಲಕ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದವರಿಗೆ ಸಾಮಾಜಿಕ ಹಾಗೂ ಆರ್ಥಿಕ ಜೀವನಮಟ್ಟವನ್ನು ಸುಧಾರಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.