ಬಳ್ಳಾರಿ: ಜುಲೈ 10ರಿಂದ ಅನಿರ್ದಿಷ್ಟವಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಏಕೆಂದರೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 30ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಆರೋಗ್ಯ ಸಚಿವ ಸೇರಿ ಎಲ್ಲ ಸಚಿವರು ಹಾಗೂ ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಅವರೂ ಹೇಳಿದ್ದಾರೆ.

ಈವರೆಗೆ ನಮಗೆ ಮುಖ್ಯಮಂತ್ರಿಗಳ ಕಚೇರಿಯಿಂದಾಗಲಿ, ಯಾರಿಂದಲೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ಜುಲೈ 10 ರಿಂದ ಅನಿರ್ದಿಷ್ಟವಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದರು.

ನಮ್ಮ ಬೇಡಿಕೆಗಳಾದ ಸರ್ಕಾರವು ಗೌರವಧನ 3 ಸಾವಿರವನ್ನು ಎಲ್ಲರಿಗೂ ಕೊಟ್ಟಿಲ್ಲ. ಕೆಲವೆಡೆಗಳಲ್ಲಿ ಕೊಟ್ಟಿರುವ ಚೆಕ್ ಗಳು ಹಣವಿಲ್ಲದೆ ನಗದಾಗಿಲ್ಲ. 12 ಸಾವಿರ ಗೌರವಧನ ಖಾತರಿಪಡಿಸಬೇಕು. ಸೂಕ್ತ ರಕ್ಷಣಾ ಸಾಮಗ್ರಿಗಳನ್ನು ನೀಡಬೇಕು ಎಂದು ಆಗ್ರಹಿಸಿದರು.