ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಆಹಾರ ಸಚಿವ ಕೆ. ಗೋಪಾಲಯ್ಯಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಕೆ.ಗೋಪಾಲಯ್ಯಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿರುವ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಇಂದು ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಹಾಗೂ ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ತಿಳಿಸಿದ್ದಾರೆ.