ಬೆಂಗಳೂರು: ಏ.29ರಿಂದ ಚಂದನ ವಾಹಿನಿಯಲ್ಲಿ ಆರಂಭಿಸಲಾಗಿರುವ ಎಸ್ಸೆಸ್ಸೆಲ್ಸಿ ಪುನರ್ಮನನ ತರಗತಿಗಳನ್ನು ಆಂಗ್ಲ ಮಾಧ್ಯಮದಲ್ಲಿಯೂ ಸಹ ಇಂದಿನಿಂದ ಪ್ರಾರಂಭಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಕನ್ನಡ ಮಾಧ್ಯಮದಲ್ಲಿ ಪುನರ್ಮನನ ತರಗತಿಗಳನ್ನು ರಾಜ್ಯದ ವಿದ್ಯಾರ್ಥಿ ಸಮೂಹ ಬೃಹತ್ ಮಟ್ಟದಲ್ಲಿ ಸದುಪಯೋಗಪಡಿಸಿಕೊಳ್ಳುತ್ತಿದ್ದು, ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೂ ಉಪಯೋಗವಾಗುವಂತೆ ಪುನರ್ಮನನ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.