ಬೆಂಗಳೂರು: ಇಂದಿನಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಜೂನ್ 1ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.