ನವದೆಹಲಿ : ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಸೇರಿದಂತೆ, ರಾಜಸ್ಥಾನ, ಪಂಜಾಬ್, ಬಿಹಾರ, ಪಶ್ಚಿಮಬಂಗಾಳ, ತಮಿಳುನಾಡು, ಪುದುಚೇರಿ ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪಂಚಾಬ್, ಹರಿಯಾಣ, ಚಂಡೀಗಡ, ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಕೆಲವು ರಾಜ್ಯಗಳಲ್ಲಿ ಸೆ. 4 ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.