ಕಲಬುರಗಿ:  ಈ ಹಿಂದೆ ಜುಲೈ 27ರ ಮಧ್ಯರಾತ್ರಿ ತನಕ ವಿಸ್ತರಣೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ ಎಂದು  ಜಿಲ್ಲಾಧಿಕಾರಿ ಶರತ್ ಬಿ. ಹೇಳಿದ್ದಾರೆ.

ನಗರ ಮತ್ತು ಇತರ ತಾಲ್ಲೂಕುಗಳಲ್ಲಿ ಬುಧವಾರದಿಂದ ಯಾವುದೇ ಲಾಕ್ ಡೌನ್ ಇರುವುದಿಲ್ಲ. ಕೊರೋನಾ ನಿಯಂತ್ರಣಕ್ಕಾಗಿ ಜುಲೈ 27ರ ವರೆಗೆ ಘೋಷಣೆ ಮಾಡಲಾಗಿದ್ದ ಲಾಕ್ ಡೌನ್ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲಾಧಿಕಾರಿ ಶರತ್ ಬಿ. ಅವರು ಹಿಂಪಡೆದು ಆದೇಶ ಹೊರಡಿಸಿದ್ದಾರೆ.!