ಬೆಂಗಳೂರು : ಇಂದಿನಿಂದ ಜುಲೈ 1 ರವರೆಗೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು , ಇದೇ ವೇಳೆ ಸಮುದ್ರಕ್ಕೆ ಮೀನು ಹಿಡಿಯುವ ಸಲುವಾಗಿ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ .

ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಒಂದೇ ಅವಧಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದ ರಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಮುಂಗಾರು ಚುರುಕಾಗಿರುವುದರಿಂದ ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.