ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ  10ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರದಂದು ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಅರಬ್ಬಿ ಸಮುದ್ರದಿಂದ ರಾಜ್ಯದ ಕರಾವಳಿಯೆಡೆಗೆ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.