ಬೆಂಗಳೂರು: ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ,2ರಿಂದ 5ರವೆರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬುಧುವಾರದಂದು ಗುಡುಗು,ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಉಡುಪಿ ಜಿಲ್ಲೆ ಸೇರಿದಂತೆ ಹಲವೆಡೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.