ಬೆಂಗಳೂರು: ಇಂದಿನಿಂದ ಮುಂಗರು ಚುರುಕು ಹಾಗಾಗಿ ರಾಜ್ಯದ ಹಲವೆಡೆ ನೈರುತ್ಯ ಚುರುಕುಗೊಂಡಿದೆ. ಇಂದಿನಿಂದ, 14 ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡು, ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.