ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ. 12 ರಿಂದ 15 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಹಾಸನ ಶಿವಮೊಗ್ಗದಲ್ಲಿ ಜೂ. 13 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.