ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಪ್ರದೇಶದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ ಭಾಗದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.