ಬೆಂಗಳೂರು; ಕರ್ನಾಟಕದಲ್ಲಿ ಇಂದಿನಿಂದ 5 ದಿನಗಳಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಆ. 19ರವರೆಗೆ ಮಳೆ ಹೆಚ್ಚಳವಾಗಲಿದೆ. ಉಳಿದಂತೆ ಕೊಡಗು, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನದ ಕೆಲವು ಭಾಗಗಳಲ್ಲಿ ಮಳೆಯ ಪ್ರಮಾಣ ತಗ್ಗಲಿದೆ ಎಂದು ತಿಳಿಸಿದೆ.