ಬೆಂಗಳೂರು: ರಾಜ್ಯದ ಕರಾವಳಿ, ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಅ. 13ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು-ಸಿಡಿಲು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಸಲಾಗಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ