ಬೆಂಗಳೂರು: ಇಂದಿನಿಂದ ಬೆಳಗ್ಗೆ 7 ಗಂಟೆಯಿಂದಲೇ 4000 ಬಸ್ ಗಳನ್ನು ಓಡಿಸಲಾಗುತ್ತದೆ. ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಅವರು ಹೇಳಿದ್ದಾರೆ.

ಸಂಸ್ಥೆಯ ಎಲ್ಲಾ ನೌಕರರೂ ಕೂಡ ಆಗಮಿಸದ ಕಾರಣ ಬಸ್ ಸಂಚಾರದಲ್ಲಿ ವ್ಯತ್ಯಯವಾಗುತ್ತಿದೆ. ಎಲ್ಲರಿಗೂ ನೋಟಿಸ್ ನೀಡಿ ಕಡ್ಡಾಯ ಹಾಜರಾತಿಗೆ ಸೂಚಿಸಿದ್ದೇವೆ. ಮಧ್ಯಾಹ್ನ 3 ಗಂಟೆಯಿಂದಲೇ 3500 ಬಸ್ ಗಳನ್ನೂ ರಸ್ತೆಗಿಳಿಸುತ್ತೇವೆ. ನಮ್ಮ ಅಧಿಕಾರಿಗಳು ಅನುಚಿತವಾಗಿ ನಡೆದುಕೊಂಡಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.