ಬೆಂಗಳೂರು: ಕೂಡಲಸಂಗಮದ ಬಸವ ಧರ್ಮ ಪೀಠದ ಸದಸ್ಯರು ಇಂದಿರಾ ಕ್ಯಾಂಟೀನ್ ಹೆಸರಿನ ಬದಲು ಬಸವ ಕ್ಯಾಂಟೀನ್ ಹೆಸರಿಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಹೆಸರನ್ನು ನಾಡಪ್ರಭು ಕೆಂಪೇಗೌಡ ಕ್ಯಾಂಟೀನ್ ಎಂದು ಮರುನಾಮಕರಣ ಮಾಡಲು ಬಿಬಿಎಂಪಿ ಚಿಂತನೆ ನಡೆಸಿತ್ತು. ಆದರೆ ಕೂಡಲಸಂಗಮದ ಬಸವ ಧರ್ಮ ಪೀಠದ ಸದಸ್ಯರು ಬಸವ ಕ್ಯಾಂಟಿನ್ ಎಂದು ಹೆಸರಿಡುಂತೆ ಸರಕಾರಕ್ಕೆ ಒತ್ತಾಯಿಸಿದ್ದಾರೆ.