ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರಂಭಿಸಲಾಗಿರುವ ಇಂದಿರಾ ಕ್ಯಾಂಟೀನ್ ಯೋಜನೆಗೆ ಮರುನಾಮಕರಣ ಮಾಡಲು ಸದ್ಯದ ರಾಜ್ಯ ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆಯಂತೆ.!

ಈ ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿ ನಾಡಪ್ರಭು ಕೆಂಪೇಗೌಡ ಕ್ಯಾಂಟೀನ್ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಿದ್ದು, ಈ ಸಂಬಂಧ ಶೀಘ್ರದಲ್ಲೇ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಲಿದೆ ಎಂದು ಹೇಳಲಾಗುತ್ತಿದೆ ಎಂಬ ಮಾತು ಕೇಳಿಬರುತ್ತಿದೆ.!