ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮೊದಲ ಹಂತದ ಆನ್ ಲಾಕ್ ಪ್ರಕ್ರಿಯೆ ಇಂದು ಕೊನೆಯಾಗಲಿದ್ದು, ಇಂದೇ ಪ್ರಧಾನಿ ಮೋದಿ ಭಾಷಣ ಮಾಡುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.