ಬೆಂಗಳೂರು: ರಾಜ್ಯದ ಕರಾವಳಿ ಹಾಗೂ  ದಕ್ಷಿಣ ಒಳನಾಡಿನಲ್ಲಿ ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ಚಾಮರಾಜನಗರ, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.