ಬೆಂಗಳೂರು; ಇಂದು ರಾಜ್ಯದ ವಿಜಯಪುರ, ಬೀದರ್, ಬೆಳಗಾವಿ, ಕಲಬುರ್ಗಿ, ಯಾದಗಿರಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಆ.16ರಿಂದ 20ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, 5 ದಿನ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು.