ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಆ.17ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೋಮವಾರದಂದು ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೊ ಅಲರ್ಟ್  ಘೋಷಿಸಲಾಗಿದೆ.!