ಬೆಂಗಳೂರು; ರಾಜ್ಯ ಆರೋಗ್ಯ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು ಮತ್ತೆ 45 ನೂತನ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಒಟ್ಟು ಸೋಂಕಿತರ ಸಂಖ್ಯೆ 1032ಕ್ಕೆ ಏರಿಕೆಯಾಗಿದೆ ಎಂದಿದೆ. ಬೆಂಗಳೂರಿನಲ್ಲಿ-13, ದಕ್ಷಿಣ ಕನ್ನಡ-16, ಉಡುಪಿ-5, ಬೀದರ್-3, ಹಾಸನ-3, ಚಿತ್ರದುರ್ಗ-2, ಕೋಲಾರ, ಬಾಗಲಕೋಟೆ ಹಾಗೂ ಶಿವಮೊಗ್ಗದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿವೆ. ಈವರೆಗೆ 476 ಮಂದಿ ಗುಣಮುಖರಾಗಿದ್ದು, ಒಟ್ಟು 35 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ ಎಂದು ಸ್ಪಷ್ಟಪಡಿಸಿದೆ.