ಗಂಗಾವತಿ: ಬಳ್ಳಾರಿ, ರಾಯಚೂರು, ಕೊಪ್ಪಳ ಲೋಕಸಭಾ ಪ್ರಚಾರದ ನಿಮಿತ್ತ ಗಂಗಾವತಿಯಲ್ಲಿ ಇಂದು ನಡೆಯಲಿರುವ ಬಿಜೆಪಿ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

ಮೂರು ಲೋಕಸಭಾ ಕ್ಷೇತ್ರಗಳಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

24 ವಿಧಾನಸಭಾ ಕ್ಷೇತ್ರಗಳ ಜನರನ್ನು ಕರೆತರಲು ಪಕ್ಷದ ಮುಖಂಡರು ಸಿದ್ಧತೆ ಪೂರ್ಣಗೊಳಿಸಿದ್ದಾರೆ ಎನ್ನಲಾಗಿದೆ. ಮಧ್ಯಾಹ್ನ 3ಕ್ಕೆ ಗಂಗಾವತಿಗೆ ಮೋದಿ ಆಗಮಿಸಲಿದ್ದು, ಸಮಾವೇಶದ ಪಕ್ಕದಲ್ಲೇ ಹೆಲಿಪ್ಯಾಡ್ ನಿರ್ಮಿಸಲಾಗಿದೆ.