ನವದೆಹಲಿ : ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯ (ನೀಟ್) ಫಲಿತಾಂಶವನ್ನು ಇಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಲಿದೆ.

ಕೋವಿಡ್ ಕಾರಣದಿಂದಾಗಿ ಪರೀಕ್ಷೆಗೆ ಹಾಜರಾಗದಿದ್ದವರಿಗೆ ಅ.14 ರಂದು ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿತ್ತು. ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆದಿದ್ದು, ನೋಂದಾಯಿಸಿಕೊಂಡಿದ್ದ 15.9 ಲಕ್ಷ ಅಭ್ಯರ್ಥಿಗಳಲ್ಲಿ ಶೇ. 90 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇಂದು ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.