ಬೆಂಗಳೂರು : ಏಪ್ರಿಲ್ 18 ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ಅಂತಿಮ ತೆರೆ ಬೀಳಲಿದೆ.

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ಮುಕ್ತಾಯಕ್ಕೆ 48 ತಾಸು ಮನ್ನ ಅಂದರೆ ಮಂಗಳವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರದ ಅಬ್ಬರಕ್ಕೆ ತೆರೆ ಬೀಳಲಿದೆ.

ಸ್ಥಳೀಯ ಮತದಾರರಲ್ಲದ ನಾಯಕರೂ ಮಂಗಳವಾರ ಸಂಜೆ ಕ್ಷೇತ್ರಗಳನ್ನು ಬಿಟ್ಟು ಹೋಗಬೇಕಿದೆ. ಹೀಗಾಗಿ ಸೀಮಿತ ಅವಧಿಯೊಳಗೆ ಇಡೀ ಕ್ಷೇತ್ರಗಳನ್ನು ತಲುಪಿ ಪ್ರಚಾರ ನಡೆಸಲು ಸಾಧ್ಯವಾಗದ ಅಭ್ಯರ್ಥಿಗಳ ಒತ್ತಡಕ್ಕೆ ಸಿಲುಕಿದ್ದಾರೆ. ಬಹಿರಂಗ ಪ್ರಚಾರಕ್ಕೆ ತೆರೆಬಿದ್ದ ಬಳಿಕ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಏ.17 ರಂದು ಮನೆ ಮನೆ ಪ್ರಚಾರ ನಡೆಸಬಹುದು.!