ಬೆಂಗಳೂರು: ಕರಾವಳಿಯಲ್ಲಿ ಇಂದು ಉಳಿದೆಡೆ ನಾಳೆ
ಸೋಮವಾರ ಈದ್ ಉಲ್ ಫಿತ್ರ್ ಹಬ್ಬವನ್ನು ಆಚರಿಸಲಾಗುವುದು.

ಬೆಂಗಳೂರಿನಲ್ಲಿ ಶನಿವಾರ ನಡೆದ ಕರ್ನಾಟಕ ಚಂದ್ರದರ್ಶನ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ ಯಾವುದೇ ಭಾಗ
ದಲ್ಲಿ ಶವ್ವಾಲ್ ತಿಂಗಳ ಚಂದ್ರದರ್ಶನ ಆಗಿಲ್ಲ ಎಂದು ಸಮಿತಿಯ ಮುಖ್ಯಸ್ಥ ಮಕ್ಸೂದ್ ಇಮ್ರಾನ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಹಾಸನ ಸೇರಿ ಕೆಲವೆಡೆ ಮಾತ್ರ ಭಾನುವಾರ ಹಬ್ಬ ಆಚರಿಸಲಾಗುವುದು ಎಂದಿದ್ದಾರೆ.

ಉಳಿದಂತೆ ಎರಡು ದಿನ ಹಬ್ಬವನ್ನು ಆಚರಿಸಲಾಗುತ್ತದೆ.