ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಎರಡು ದಿನ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.
ಇನ್ನು ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
No comments!
There are no comments yet, but you can be first to comment this article.