ಬೆಂಗಳೂರು: ಜುಲೈ 19 ಮತ್ತು 20ರಂದು ಕರ್ನಾಟಕದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಎರಡು ದಿನ ಭಾರಿ ಮಳೆಯಾಗಲಿದ್ದು ‘ಅರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ 40 ರಿಂದ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುವ ಜೊತೆಗೆ 4.1 ಮೀಟರ್ ಎತ್ತರದ ಅಲೆಗಳು ಏಳುತ್ತಿವೆ.

ಜೂನ್ 21ರ ತನಕ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಣೆ ಮಾಡಲಾಗಿದೆ.