ಬೆಂಗಳೂರು : ಇಂದು ಮತ್ತು ನಾಳೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ನಗರ ಜಿಲ್ಲೆ, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.