ಕಲಬುರಗಿ: ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಇಂದು ಸಾಯಂಕಾಲ ಬೀಳುತ್ತದೆ ಎಂದು ಬಿಜೆಪಿ ಸಂಸದ ಉಮೇಶ್​ ಜಾಧವ್​ ಭವಿಷ್ಯ ನುಡಿದಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಆದಷ್ಟು ಬೇಗ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡಿ ತಮ್ಮ ನಿರ್ಧಾರ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಸ್ಪೀಕರ್ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಅವರು ಯಾವ ರೀತಿ ತೀರ್ಪು ಕೊಡುತ್ತಾರೆ ಎಂದು ಗೊತ್ತಿಲ್ಲ. ಆದರೆ ಅವರ ಮೇಲೆ ನನಗೆ ನಂಬಿಕೆ ಇದೆ ಎಂದಿದ್ದಾರೆ.