ಇಂದು ರಾಜ್ಯಕ್ಕೆ ನರೇಂದ್ರ ಮೋದಿ: ಲೋಕಸಭಾ ಚುನಾವಣೆ ರಣ ಕಹಳೆ
ಹುಬ್ಬಳ್ಳಿ: ಲೋಕಸಭೆ ಚುನಾವಣಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ವಿವಿಧ ರಾಜ್ಯಗಳಲ್ಲಿ ಪ್ರಚಾರ ನಡೆಸಿದ್ದು, ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ಹುಬ್ಬಳ್ಳಿಯ ಕೆ.ಎಲ್.ಇ. ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದು, ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಭಾರಿ ಭದ್ರತೆ ಒದಗಿಸಲಾಗಿದೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.