ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸೆ.11ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಂ, ದಾವಣಗೆರೆ, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರದಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.