ಬೆಂಗಳೂರು: ಇಂದಿನಿಂದ ವಾರದ ವರೆಗೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಏನೇನು ಇರುತ್ತೆ, ಯಾವುದು ಇರಲ್ಲ ಅಂದರೆ,  ಕಟ್ಟಡ ನಿರ್ಮಾಣ ಕಾಮಗಾರಿ, ಹೋಟೆಲ್ ಗಳಲ್ಲಿ ಪಾರ್ಸೆಲ್, ಮೆಡಿಕಲ್, ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳಿಗೆ ಅಡ್ಡಿ ಇರಲ್ಲ.

ಆದರೆ ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳನ್ನು ತೆರೆಯುವಂತಿಲ್ಲ. ಜೊತೆಗೆ ಬಿಎಂಟಿಸಿ, ಕೆಎಸ್ಆರ್ ಟಿಸಿ, ಖಾಸಗಿ ಬಸ್, ಟ್ಯಾಕ್ಸಿ, ಕ್ಯಾಬ್, ಆಟೋ, ಮೆಟ್ರೋ ಇನ್ನಿತರೇ ಸೌಲಭ್ಯ ಇರಲ್ಲ. ಶಾಲಾ-ಕಾಲೇಜು, ಕೋಚಿಂಗ್ ಸೆಂಟರ್, ಚಿತ್ರಮಂದಿರ, ಶಾಪಿಂಗ್ ಮಾಲ್, ಸಭಾಭವನ, ಉದ್ಯಾನವನ, ದೇವಸ್ಥಾನ, ಚರ್ಚ್, ಮಸೀದಿ ಹಾಗೂ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮಗಳು ಬಂದ್ ಇರಲಿವೆ.!