ಬೆಂಗಳೂರು : ಇಂದು ರಾಯಚೂರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ.

ರಾಯಚೂರು ಹಾಗೂ ಚಿಕ್ಕೋಡಿಯಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ರಾಹುಲ್ ಗಾಂಧಿ ಅವರು ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ 2.45 ಕ್ಕೆ ರಾಯಚೂರಿನಲ್ಲಿ ಪ್ರಚಾರ ಮಾಡಿ ನಂತರ ಚಿಕ್ಕೋಡಿಗೆ ತೆರಳಲಿದ್ದಾರೆ.

ಬಳಿಕ ಸಂಜೆ 5.10 ಕ್ಕೆ ಹುಕ್ಕೇರಿಯಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ. ಈ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.