ಶ್ರಾವಣ ಮಾಸದ ಎರಡನೇ ಶುಕ್ರವಾರ ವರಮಹಾಲಕ್ಷ್ಮೀ ವ್ರತವನ್ನು ಎಲ್ಲಾ ಮುತ್ತೈದೆಯರು ಶ್ರದ್ಧಾ ಭಕ್ತಿಗಳಿಂದ ಆಚರಿಸುತ್ತಾರೆ.

ಭವಿಷ್ಯೋತ್ತರ ಪುರಾಣದ ಪ್ರಕಾರ, ಲಕ್ಷ್ಮೀಯು ಕ್ಷೀರ ಸಾಗರದಿಂದ ಅವತಾರ ತಾಳಿದಳೆಂದು ಹೇಳಲಾಗುತ್ತದೆ. ಲಕ್ಷ್ಮೀಯನ್ನು ಚಿನ್ನ, ಬೆಳ್ಳಿ ಹೂವುಗಳಿಂದ ಅಲಂಕರಿಸಿ ಪೂಜಿಸುತ್ತಾರೆ.

ಲಕ್ಷ್ಮೀ ಪೂಜೆಯನ್ನು ಗೋಧೂಳಿ ಸಮಯದಲ್ಲಿ ಮಾಡಿದರೆ ಶ್ರೇಷ್ಠ ಎನ್ನುವ ನಂಬಿಕೆ ಇದೆ. ಜಾತಿ, ಮತ, ಭೇದವಿಲ್ಲದೇ ಎಲ್ಲರೂ ಲಕ್ಷ್ಮೀ ದೇವಿಯನ್ನು ಪೂಜಿಸಿ ಆರಾಧಿಸುತ್ತಾರೆ.