ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗವಾದ ಬೆನ್ನಲ್ಲೇ ರಾಷ್ಟ್ರ ರಾಜಕಾರಣ ಮತ್ತೆ ಗರಿಗೆದರಿದೆ. ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮಹತ್ವದ ಹೆಜ್ಜೆಗೆ ಮುಂದಾಗಿದ್ದು, ಎಲ್ಲ 21 ವಿಪಕ್ಷ ನಾಯಕರೊಂದಿಗೆ ಸೇರಿ ಮಂಗಳವಾರ ಚುನಾವಣಾ ಆಯೋಗವನ್ನು ಭೇಟಿ ಮಾಡಲಿದ್ದಾರೆ.

ರಾಷ್ಟ್ರಪತಿ ಕೋವಿಂದ್ ಭೇಟಿ ಮಾಡಲಿರುವ ವಿಪಕ್ಷಗಳ ನಿಯೋಗ, ಏಕೈಕ ದೊಡ್ಡ ಪಕ್ಷವಲ್ಲದೇ, ಬಹುಮತವಿರುವ ಮೈತ್ರಿಕೂಟಕ್ಕೆ ಸರ್ಕಾರ ರಚನೆಗೆ ಅವಕಾಶ ನೀಡುವ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.