ಬೆಂಗಳೂರು: ಇದೇ 20ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟವಾಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಎಂಜಿನಿಯರಿಂಗ್ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ಸಂಬಂಧ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಕಳೆದ ವರ್ಷದ ಮಾದರಿಯಲ್ಲೇ ಸೀಟು ಹಂಚಿಕೆ ಮಾಡಿಕೊಳ್ಳಲು ಮತ್ತು ಶುಲ್ಕ ವಿಧಿಸಲು ಸಭೆಯಲ್ಲಿ ಒಮ್ಮತಕ್ಕೆ ಬರಲಾಗಿದೆ’ ಎಂದರು