ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20ರೊಳಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಫಲಿತಾಂಶದ ಕುರಿತು ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ ಕೇಳುತ್ತಿದ್ದಾರೆ. ಫಲಿತಾಂಶ ಪ್ರಕಟಣೆ ಬಗ್ಗೆ ಈಗಾಗಲೇ ತಿಳಿಸಿರುವಂತೆ ಜುಲೈ 20 ರ ಸುಮಾರಿಗೆ ಪ್ರಕಟವಾಗಲಿದೆ ಎಂದು ಮತ್ತೊಮ್ಮೆ ಹೇಳಿದರು.