ಬೆಂಗಳೂರು: ಇದೇ 25ರಿಂದ ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 24ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. 25ರಿಂದ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ 5 ದಿನಗಳವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.