ಬೆಂಗಳೂರು: ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆಗಾಗಿ ಕಾಯುತ್ತಿದ್ದೇನೆ ಎಂದು ಗುರುವಾರ ಹೇಳಿದ್ದ ಸಿಎಂ ಬಿ.ಎಸ್‌.ಯಡಿಯೂರಪ್ಪ, ಇನ್ನು 3 ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಚರ್ಚಿಸಿ ಬಂದಿದ್ದೇನೆ. ಮೂರು ದಿನಗಳಲ್ಲಿ ಎಲ್ಲವು ಅಂತಿಮವಾಗಲಿದೆ. ಹೊಸದಾಗಿ ಯಾರು ಸಚಿವರಾಗುತ್ತಾರೆ ಎನ್ನುವುದೂ ತಿಳಿಯುತ್ತದೆ ಎಂದು ಹೇಳಿದ್ದಾರೆ.