ಬೆಂಗಳೂರು : ಇನ್ನೂ ಎರಡು ಮೂರು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಕರ್ನಾಟಕದಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು ಜಿಲ್ಲೆಗಳಲ್ಲಿ 115.6 ರಿಂದ 204.4 ಮಿ.ಮೀ ಮಳೆ ಬೀಳುವ ಅಂದಾಜಿದ್ದು, ಆರೆಂಜ್ ಅರ್ಲಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ 204.5 ಮಿ.ಮೀ. ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲೂ ಜು. 24 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು. 24 ರ ನಂತರ ಮಳೆ ಪ್ರಮಾಣ ಕೊಂಚ ತಗ್ಗಲಿದೆ