ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಆ. 13ರವರೆಗೂ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಮಂಗಳೂರು, ಕಾರವಾರ ಸಮುದ್ರದಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿವೆ ಅಕ್ಕಪಕ್ಕದ ಗ್ರಾಮಗಳ ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.