ಬೆಂಗಳೂರು; ರಾಜ್ಯದ ದಕ್ಷಿಣ ಒಳನಾಡಿನ ಕಡೆಗೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಮುಂದಿನ ಎರಡು ದಿನಗಳಲ್ಲಿ ಮುಂಗಾರು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂನ್‌ 9ರ ನಂತರ ಮುಂಗಾರು ಮತ್ತಷ್ಟು ಪ್ರಬಲವಾಗಲಿದೆ. ಕರಾವಳಿ, ಮಲೆನಾಡು ಪ್ರದೇಶಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಬಿರುಸುಗೊಳ್ಳಲಿದೆ ಎಂದು ಇಲಾಖೆ ಸೂಚನೆ ನೀಡಿದೆ.