ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು,  ಇದರ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಕರಾವಳಿ ಭಾಗದಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಅಂಪಾನ್ ಚಂಡಮಾರುತದ ಪ್ರಭಾವದಿಂದ ಅರಬ್ಬಿ ಸಮುದ್ರದಲ್ಲಿ ಮಳೆಯ ಮಾರುತ ಚುರುಕುಗೊಂಡಿದೆ. ಇದರ ಪರಿಣಾಮ ರಾಜ್ಯದ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಮೈಸೂರು, ಹಾಸನ ಸೇರಿದಂತೆ ಹಲವೆಡೆ 65 ರಿಂದ 115 ಮಿ.ಮೀ. ನಷ್ಟು ಮಳೆಯಾಗುವ ನಿರೀಕ್ಷೆ ಇದೆ.!