ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಅಧಿಕಾರಿಗಳು, ಮಾಸ್ಕ್ ಧರಿಸದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು, ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಈ ನಿರ್ಧಾರವನ್ನು ಕೈಗೊಂಡಿದ್ದು, ಮಾಸ್ಕ್ ಧರಿಸದೆ ಹೊರಬಂದು ನಿಯಮ ಉಲ್ಲಂಘಿಸುವವರಿಗೆ ಇನ್ನು ಮುಂದೆ ದಂಡ ವಿಧಿಸಿ ಮನೆಗೆ ಕಳುಹಿಸದೆ, ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.!