ಚಿತ್ರದುರ್ಗ : ಬೆಳಗಾವಿಯ ಕೆ.ಎಲ್.ಇ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಇಳಕಲ್ಲಿನ ಡಾ. ಮಹಾಂತ ಅಪ್ಪಗಳವರನ್ನು ಚಿತ್ರದುರ್ಗ ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದರು.

ಇದೇ ಸಂದರ್ಭದಲ್ಲಿ ಪಾಂಡೋಮಟ್ಟಿಯ ಶ್ರೀ ಗುರುಬಸವ ಸ್ವಾಮಿಗಳು, ಸಿದ್ಧಯ್ಯನಕೋಟೆಯ ಶ್ರೀ ಬಸವಲಿಂಗ ಸ್ವಾಮಿಗಳಉ ಮತ್ತು ಇಳಕಲ್ಲಿನ ಶ್ರೀ ಗುರುಮಹಾಂತ ಸ್ವಾಮಿಗಳು ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮಿಗಳು ಮತ್ತು ಬ್ಯಾಡಗಿಯ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮಿಗಳು ಉಪಸ್ಥಿತರಿದ್ದರು.