ಬೆಂಗಳೂರು: ಈಗಲ್ಟನ್​ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಪಕ್ಷದ ಶಾಸಕರ ಮದ್ಯೆ ಗಲಾಟೆ ನಡೆದಿದೆ, ಆನಂದ್ ಸಿಂಗ್ ಅವರನ್ನು ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬುದು ಸುದ್ದಿ.

ಈ ಘಟನೆಗೆ ಸಂಬಂಧಿಸಿದಂತೆ, ಕೈ ಶಾಸಕರು ಸಚಿವರು ಒಂದೊಂದು ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಅದರಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು ಯಾವುದೇ ರೀತಿಯ ಗಲಾಟೆ ನಡೆದಿಲ್ಲ ಎಂದು ಹೇಳಿದ್ದಾರೆ. ಆದ್ರೆ ಸಂಸದ ಸುರೇಶ್ ಮಾತನಾಡಿ ಆನಂದ್ ಸಿಂಗ್ ಅವರು ಬೆಳಿಗ್ಗೆ ಎದೆ ನೋವು ಅಂತ ಆಸ್ಪತ್ರೆಗೆ ಸೇರಿದ್ದಾರೆ ಎಂಬ ಹೇಳಿಕೆಯನ್ನು ಮಾಧ್ಯಮದವರ ಮುಂದೆ ಹೇಳಿದ್ದಾರೆ.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆನಂದ್ ಸಿಂಗ್ ಮತ್ತು ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ನಡುವೆ ಗಲಾಟೆ ನಡೆದಿದೆ ಎಂಬುದು ಸುದ್ದಿ.! ಸತ್ಯಕ್ಕೆ ಕಾದು ನೋಡ ಬೇಕು. ಇದರಿಂದ ಕೈ ಪಾಳ್ಯದಲ್ಲಿ ಯಾವುದು ನೆಟ್ಟಗಿಲ್ಲ ಎಂಬುದು ವಿರೊಧ ಪಕ್ಷದವರು ಅಂಬೋಣ.!