ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನಲ್ಲಿ ಕಳೆದ ಹದಿನೈದು ದಿನಗಳಿಂದ ಮೋಡಕವಿದ ವಾತಾವರಣ ಹಾಗೂ ಮಳೆಯಿಂದಾಗಿ ಈರುಳ್ಳಿ ಬೆಳೆಗೆ ಕೊಳೆರೋಗ ಹರಡುತ್ತಿರುವ ಹಿನ್ನಲೆ ರೈತರು ಮುಂಜಾಗ್ರತಾ ಕ್ರಮವಾಗಿ ರೋಗ ಕಾಣಿಸಿಕೊಂಡ ಈರುಳ್ಳಿ ಬೆಳೆಗೆ ಕ್ಲೋರೊಪೈರಿಪಾಸ್ 2 ಮಿ.ಲೀ ಮತ್ತು ಕವಾಚ್ 2 ಗ್ರಾಂ ಅಥವಾ ಮೆನೋಕ್ರೋಟಪಾಸ್ 2 ಮೀ.ಲೀ ಅಥವಾ ಬಾವಿಸ್ಟೀನ್ ಪುಡಿ 2 ಗ್ರಾಂ ಔಷದಿಗಳನ್ನು ಒಂದು ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಸಿಂಪರಣೆ ಮಾಡುವ ಮೂಲಕ ರೋಗವನ್ನು ಹತೋಟಿಗೆ ತರಬಹುದು ಎಂದು ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಬೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

(ಸಾಂದರ್ಭಿಕ ಚಿತ್ರ)